ಅ.10 ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ
********************************
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಯುವ ಸ್ಪಂದನ ವತಿಯಿಂದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯು ಅಕ್ಟೋಬರ್ 10 ರಂದು ಬೆಳಗ್ಗೆ 11 ಗಂಟೆಗೆ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷರಾಧ ಕೆ.ಎಸ್.ಕವನ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನಿಸ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ಕೆ.ಕೆ ಇತರರು ಪಾಲ್ಗೊಳ್ಳಲಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಬೆಳಗ್ಗೆ 9.30 ಗಂಟೆಗೆ ನಗರದ ಕೋಟೆ ಆವರಣದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.