ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
*******************************************
ನಗರದ ಬಾಲಕರ ಬಾಲ ಮಂದಿರದಲ್ಲಿ 44 ಮಂದಿ ಅರ್ಹ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ಗುರುವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್ ಅವರು ವಿತರಣೆ ಮಾಡಿದರು.
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ತ್ರಿಚಕ್ರ ವಾಹನ ವಿತರಿಸಲಾಯಿತು. ತ್ರಿಚಕ್ರ ವಾಹನ ಕೀ ಹಸ್ತಾಂತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು ವಿಕಲಚೇತನರು ತ್ರಿಚಕ್ರ ವಾಹನಗಳನ್ನು ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸುವಂತಾಗಬೇಕು ಸಚಿವರು ಅವರು ಸಲಹೆ ಮಾಡಿದರು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ವೀಣಾ ಅಚ್ಚಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಡಿವೈಎಸ್‍ಪಿ ಸುಂದರರಾಜ್ ಇತರರು ಇದ್ದರು.