ಸಹಾಯಧನ ನೀಡುವ ಕಾರ್ಯಕ್ರಮ
**********************
ಮಡಿಕೇರಿ ಅ.05(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲಾ ಮಾಜಿ ಸೈನಿಕರ ಸಂಘ 2017-18ನೇ ಸಾಲಿನ ಮಹಾಸಭೆ ಮತ್ತು ಪ್ರಕೃತಿ ವಿಕೋಪಕ್ಕೆ ಸಿಲುಕಿರುವ ಮಾಜಿ ಸೈನಿಕರ ಕುಟುಂಬಕ್ಕೆ ಸಹಾಯಧನ ನೀಡುವ ಕಾರ್ಯಕ್ರಮವು ಅಕ್ಟೋಬರ್ 28 ರಂದು ಬೆಳಗ್ಗೆ 10 ಗಂಟೆಗೆ ಸಂಘದ ಅಧ್ಯಕ್ಷರಾದ ಮೇಜರ್ ಜನರಲ್ ಬಿ.ಎ.ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ಹೋಟೆಲ್ ಸಮುದ್ರದಲ್ಲಿ ನಡೆಯಲಿದೆ. ಸಭೆಗೆ ಕೊಡಗು ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು, ವಿಧವೆಯರು ಹಾಜರಾಗಬೇಕಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಂಘದ ಕಾರ್ಯದರ್ಶಿ ಮೇಜರ್ ಓ.ಎಸ್.ಚಿಂಗಪ್ಪ ದೂರವಾಣಿ ಸಂಖ್ಯೆ 9845331431 ನ್ನು ಸಂಪರ್ಕಿಸಬಹುದಾಗಿದೆ.