ಹುಚ್ಚು ನಾಯಿ ರೋಗದ ಬಗ್ಗೆ ಜಾಗೃತಿ ಶಿಬಿರ
****************************
ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ರೋಗದ (ರೇಬೀಸ್) ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಜಾಗೃತಿ ಶಿಬಿರದ ಸಭಾ ಕಾರ್ಯಕ್ರಮವು ಅಕ್ಟೋಬರ್ 06 ರಂದು ಬೆಳಗ್ಗೆ 9.45 ಗಂಟೆಗೆ ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್.ಮಂಜುನಾಥ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಕೆ.ಎನ್.ವಿ.ಎಸ್.ಬಿ.ಗುಪ್ತಾಜೀ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಎ.ಬಿ.ತಮ್ಮಯ್ಯ, ಅರಂತೋಡು ಪಶು ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು ಇತರರು ಪಾಲ್ಗೊಳ್ಳಲಿದ್ದಾರೆ.
ಹುಚ್ಚುನಾಯಿ ರೋಗ (ರೇಬಿಸ್)ದ ವಿರುದ್ಧ ಸಾಕು ನಾಯಿಗಳಿಗೆ ಅಕ್ಟೋಬರ್ 06 ರಿಂದ ಅಕ್ಟೋಬರ್ 08 ರವರೆಗೆ ಬೆಳಗ್ಗೆ 9 ರಿಂದ 12 ಗಂಟೆಯವರೆಗೆ ನಗರದ ಜಲ್ಲಾ ಪಶು ಆಸ್ಪತ್ರೆ (ಪಾಲಿಕ್ಲಿನಿಕ್) ಆವರಣದಲ್ಲಿ ಉಚಿತ ಲಸಿಕೆ ಹಾಕುವ ಕಾರ್ಯಕ್ರಮ ನಡೆಯಲಿದೆ.